ಮೆಕ್ಕಾ ಬಳಿ ಯಾತ್ರಾರ್ಥಿಗಳಿದ್ದ ಬಸ್ಸಿಗೆ ಬೆಂಕಿ; 35 ಮಂದಿ ಸಾವು

ಬುಧವಾರ ಮೆಕ್ಕಾ-ಮದೀನಾ ರಸ್ತೆಯಲ್ಲಿ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ 35 ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

Last Updated : Oct 17, 2019, 09:14 AM IST
ಮೆಕ್ಕಾ ಬಳಿ ಯಾತ್ರಾರ್ಥಿಗಳಿದ್ದ ಬಸ್ಸಿಗೆ ಬೆಂಕಿ; 35 ಮಂದಿ ಸಾವು title=

ಮುಸ್ಲಿಂ ಪವಿತ್ರ ನಗರ ಮಕ್ಕಾ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ 35 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಸೌದಿ ಅರೇಬಿಯಾದ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಮೆಕ್ಕಾ-ಮದೀನಾ ರಸ್ತೆಯಲ್ಲಿ ಸಂಜೆ ಸುಮಾರು 7 ಗಂಟೆ ಸಮಯದಲ್ಲಿ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಸೌದಿ ಅರೇಬಿಯಾದ ಮದೀನಾ ಪ್ರಾಂತ್ಯದ ಪೊಲೀಸರು ತಿಳಿಸಿದ್ದಾರೆ ಎಂದು ಸೌದಿ ಪ್ರೆಸ್ ಏಜೆನ್ಸಿ ವರದಿ ಮಾಡಿದೆ.

ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.

Trending News