Afghanistan: ಕಾಬೂಲ್‌ನಲ್ಲಿ ಭಾರೀ ಸ್ಫೋಟ, 32 ಮಂದಿ ಮೃತ, 40 ಮಂದಿಗೆ ಗಾಯ

Blast In Kabul:ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಭೀಕರ ಬಾಂಬ್ ಸ್ಫೋಟ ಸಂಭವಿಸಿದೆ. ಈ ಬಾಂಬ್ ಸ್ಫೋಟದಲ್ಲಿ 32 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಜನರು ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.

Written by - Yashaswini V | Last Updated : Sep 30, 2022, 01:21 PM IST
  • ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಭಾರೀ ಸ್ಫೋಟ
  • ಕಾಬೂಲ್‌ನ ದಷ್ಟಿ ಬರ್ಚಿ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಬಾಂಬ್ ಸ್ಫೋಟ
  • ಘಟನೆಯಲ್ಲಿ 32 ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ
Afghanistan: ಕಾಬೂಲ್‌ನಲ್ಲಿ ಭಾರೀ ಸ್ಫೋಟ, 32 ಮಂದಿ ಮೃತ, 40 ಮಂದಿಗೆ ಗಾಯ title=
Kabul Blast

ಕಾಬೂಲ್ ಸ್ಫೋಟ: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಇಂದು (ಶುಕ್ರವಾರ) ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿದ್ದು, 32 ಜನರು ಸಾವನ್ನಪ್ಪಿದ್ದಾರೆ. ಅದೇ ಸಮಯದಲ್ಲಿ, ಈ ಬಾಂಬ್ ಸ್ಫೋಟದಲ್ಲಿ 40 ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗುತ್ತದೆ. ಕಾಬೂಲ್‌ನ ದಷ್ಟಿ ಬರ್ಚಿ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಸ್ಫೋಟ ಸಂಭವಿಸಿದೆ ಎಂದು ತಾಲಿಬಾನ್ ವಕ್ತಾರ ಖಾಲಿದ್ ಜದ್ರಾನ್ ಹೇಳಿದ್ದಾರೆ. ಆದಾಗ್ಯೂ, ಇದುವರೆಗೂ ಸ್ಫೋಟದ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ.

ಅಫ್ಘಾನಿಸ್ತಾನದ ಅಲ್ಪಸಂಖ್ಯಾತ ಶಿಯಾ ಸಮುದಾಯದ ಹೆಚ್ಚಿನ ಜನರು ವಾಸಿಸುತ್ತಿರುವ ಕಾಬೂಲ್‌ನ ದಷ್ಟಿ ಬರ್ಚಿ ಪ್ರದೇಶದಲ್ಲಿ ಈ ಭೀಕರ ಸ್ಪೋಟ ಸಂಭವಿಸಿದೆ. ಎನ್‌ಜಿಒ ಆಫ್ಘನ್ ಪೀಸ್ ವಾಚ್, ಆತ್ಮಾಹುತಿ ಬಾಂಬರ್ ವಿದ್ಯಾರ್ಥಿಗಳ ನಡುವೆ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ- ನಾಳೆ ನಾಲ್ಕು ಉಕ್ರೇನ್ ಪ್ರದೇಶಗಳನ್ನು ಔಪಚಾರಿಕವಾಗಿ ವಶಪಡಿಸಿಕೊಳ್ಳಲಿದೆ ರಷ್ಯಾ

ಅದೇ ಸಮಯದಲ್ಲಿ, ಶುಕ್ರವಾರ ಮುಂಜಾನೆ ಸ್ಫೋಟ ಸಂಭವಿಸಿದೆ ಎಂದು ಅಫ್ಘಾನಿಸ್ತಾನದ ಆಂತರಿಕ ಸಚಿವಾಲಯದಲ್ಲಿ ತಾಲಿಬಾನ್ ನೇಮಕಗೊಂಡ ವಕ್ತಾರ ಅಬ್ದುಲ್ ನಫಿ ಟಾಕೋರ್ ಹೇಳಿದ್ದಾರೆ. ನಮ್ಮ ತಂಡಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಬ್ದುಲ್ ನಫಿ ಟ್ಯಾಕೋರ್ ತಿಳಿಸಿದರು.

ವಾಸ್ತವವಾಗಿ, ಕಾಜ್ ಎಜುಕೇಶನಲ್ ಸೆಂಟರ್ ಅನ್ನು ಗುರಿಯಾಗಿಸಿಕೊಂಡು ಈ ಬಾಂಬ್ ಸ್ಫೋಟ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಕಾಬೂಲ್‌ನ ವಜೀರ್ ಅಕ್ಬರ್ ಖಾನ್ ಪ್ರದೇಶದ ಬಳಿ ಕೂಡ ಇದೇ ರೀತಿಯ ಬಾಂಬ್ ಸ್ಫೋಟ ಸಂಭವಿಸಿತ್ತು ಎಂಬುದು ಗಮನಾರ್ಹ ಸಂಗತಿ.

ಇದನ್ನೂ ಓದಿ- ರಷ್ಯಾದ ಮೇಲೆ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಲು ಮುಂದಾದ ಯುಎಸ್

ಕಾಬೂಲ್‌ನಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಹೊರಗೆ ಇತ್ತೀಚೆಗೆ ನಡೆದ ಸ್ಫೋಟವನ್ನು ಸಹ ಬಲವಾಗಿ ಖಂಡಿಸಲಾಗಿದೆ. ಕಳೆದ ವರ್ಷ ಯುಎಸ್ ಬೆಂಬಲಿತ ನಾಗರಿಕ ಸರ್ಕಾರವನ್ನು ಉರುಳಿಸಿದ ನಂತರ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ತಮ್ಮ ಆಳ್ವಿಕೆಯ ಒಂದು ವರ್ಷವನ್ನು ಪೂರ್ಣಗೊಳಿಸಿದಾಗಲೂ ಅಫ್ಘಾನಿಸ್ತಾನದಲ್ಲಿ ಸರಣಿ ಬಾಂಬ್ ಸ್ಫೋಟಗಳು ನಡೆದಿದ್ದವು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News