ಪುಲ್ವಾಮಾ ಉಗ್ರರ ದಾಳಿಗೆ ಅಮೇರಿಕಾ ಖಂಡನೆ

ಪುಲ್ವಾಮಾ ದಾಳಿಯನ್ನು ಖಂಡಿಸಿ, ಅಮೇರಿಕಾ ವಿದೇಶ ಸಚಿವಾಲಯ ಹೇಳಿಕೆ ನೀಡಿದ್ದು, ಭಯೋತ್ಪಾದನೆಯನ್ನು ಎದುರಿಸಲು ಭಾರತ ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲು ಬದ್ಧ ಎಂದು ಹೇಳಿದೆ.

Last Updated : Feb 15, 2019, 12:41 PM IST
ಪುಲ್ವಾಮಾ ಉಗ್ರರ ದಾಳಿಗೆ ಅಮೇರಿಕಾ ಖಂಡನೆ title=

ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಗುರುವಾರ ನಡೆದ ಭಯೋತ್ಪಾದಕ ದಾಳಿಯನ್ನು ಅಮೆರಿಕ ಖಂಡಿಸಿದೆ. ಭಯೋತ್ಪಾದಕರಿಗೆ ಸುರಕ್ಷಿತ ತಾಣ ಮತ್ತು ಬೆಂಬಲವನ್ನು ನೀಡಬಾರದೆಂದು ಎಲ್ಲ ದೇಶಗಳಿಗೆ ಒತ್ತಾಯಿಸಿದೆ. 

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಇ-ಮೊಹಮ್ಮದ್ ನಡೆಸಿರುವ ಈ ದಾಳಿಯನ್ನು ಬಾಂಗ್ಲಾದೇಶ, ನೇಪಾಳ, ರಷ್ಯಾ ಸೇರಿದಂತೆ ವಿಶ್ವದ ಹಲವು ರಾಷ್ಟ್ರಗಳು ಖಂಡಿಸಿವೆ. ಆದರೆ ಪಾಕಿಸ್ತಾನದ ಮಿತ್ರ ರಾಷ್ಟ್ರ ಚೀನಾ ಮಾತ್ರ ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಭಾರತದ 44 ಯೋಧರು ಹುತಾತ್ಮ:
ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆ ನಡೆಸಿರುವ ಭೀಕರ ದಾಳಿಯಲ್ಲಿ ಭಾರತದ 44 ಯೋಧರು ಹುತಾತ್ಮರಾಗಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್‌ಗೆ ಜೈಷ್‌-ಎ-ಮೊಹಮ್ಮದ್‌ ಉಗ್ರನೊಬ್ಬ ಸ್ಫೋಟಕ ತುಂಬಿದ್ದ ಸ್ಕಾರ್ಪಿಯೊವನ್ನು ಡಿಕ್ಕಿ ಹೊಡೆಸಿದ್ದರಿಂದ 44 ಯೋಧರು ಹುತಾತ್ಮರಾಗಿದ್ದಾರೆ. 

ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ ಅಮೇರಿಕಾ:
ಪುಲ್ವಾಮಾ ದಾಳಿಯನ್ನು ತೀವ್ರವಾಗಿ ಖಂಡಿಸಿ, ಅಮೇರಿಕಾ ವಿದೇಶ ಸಚಿವಾಲಯ ಹೇಳಿಕೆ ನೀಡಿದ್ದು, ಭಯೋತ್ಪಾದನೆಯನ್ನು ಎದುರಿಸಲು ಭಾರತ ಸರ್ಕಾರಕ್ಕೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲು ಬದ್ಧವಾಗಿದೆ ಎಂದು ಹೇಳಿದೆ. ಹುತಾತ್ಮ ಯೋಧರ ಕುಟುಂಬಗಳಿಗೆ ಸಾಂತ್ವನ ವ್ಯಕ್ತಪಡಿಸಿದರು ಯುಎಸ್ ಇಲಾಖೆಯು ಉಪ ವಕ್ತಾರ ರಾಬರ್ಟ್ ಪಲ್ಲಾಡಿನೊ, "ಭಾರತದ ಜಮ್ಮು ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಯೋಧರ ಮೇಲಿನ ದೈಯನ್ನು ತೀವ್ರವಾಗಿ ಖಂಡಿಸುತ್ತದೆ" ಎಂದು ಹೇಳಿದ್ದಾರೆ.

ವಿಶ್ವ ಸಂಸ್ಥೆಯಿಂದ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲ್ಪಟ್ಟಿರುವ ಪಾಕಿಸ್ತಾನ ಮೂಲದ ಭಯೋತ್ಪಾದಕ ಜೈಶ್-ಎ-ಮೊಹಮ್ಮದ್ ಈ ದುಷ್ಕೃತ್ಯದ ಜವಾಬ್ದಾರಿಯನ್ನು ತೆಗೆದುಕೊಂಡಿದೆ. ಭಯೋತ್ಪಾದಕರ ಸುರಕ್ಷತೆ ಮತ್ತು ಬೆಂಬಲವನ್ನು ತಪ್ಪಿಸಬಹುದು. ಹೀಗಾಗಿ ಯುಎನ್ ಭದ್ರತಾ ಮಂಡಳಿಯ ನಿರ್ಣಯವನ್ನು ಅನುಸರಿಸಲು ಎಲ್ಲಾ ರಾಷ್ಟ್ರಗಳಿಗೆ ಕರೆ ನೀಡಲಾಗಿದೆ ಎಂದು ಪಲ್ಲಾಡಿನೊ ಹೇಳಿದರು.

ಬಾಂಗ್ಲಾದೇಶದ ಪ್ರಧಾನ ಮಂತ್ರಿ ಶೇಖ್ ಹಸೀನಾ, ನೇಪಾಳ ಪ್ರಧಾನಮಂತ್ರಿ ಕೆ.ಪಿ. ಓಲಿ ಶರ್ಮಾ, ಮಾಲ್ಡೀವ್ಸ್, ಭೂತಾನ್ ರಾಷ್ಟ್ರಪತಿಗಳು ಈ ದುಷ್ಕೃತ್ಯವನ್ನು ಖಂಡಿಸಿದ್ದು ಭಾರತದೊಂದಿಗೆ ನಾವಿದ್ದೇವೆ ಎಂದಿದ್ದಾರೆ. ಕಾಶ್ಮೀರದ ಪುಲ್ವಾಮಾದಲ್ಲಿ ದಾಳಿ  'ಗಂಭೀರವಾದ ವಿಷಯ' ಎಂದು ಪಾಕಿಸ್ತಾನ ಸರ್ಕಾರ ಹೇಳಿದೆ ನೀಡಿದೆ. ಅದಾಗ್ಯೂ, ಪಾಕ್ ಪ್ರಧಾನಮಂತ್ರಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Trending News