Bill Clinton: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಸದ್ಯ ಬಿಲ್ ಕ್ಲಿಂಟನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು,  ಉತ್ತಮ ಚೇತರಿಕೆ ಕಾಣುತ್ತಿದ್ದಾರೆ ಎಂದು ಅವರ ವಕ್ತಾರರಾಗಿರುವ ಏಂಜೆಲ್ ಅರೇನಾ(Angel Ureña) ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.   

Written by - Zee Kannada News Desk | Last Updated : Oct 15, 2021, 12:16 PM IST
  • ಅನಾರೋಗ್ಯದ ಕಾರಣ ಅಮೆರಿಕದ ಮಾಜಿ ಅಧ್ಯಕ್ಷ ಬಿಲ್​ ಕ್ಲಿಂಟನ್​ ಆಸ್ಪತ್ರೆಗೆ ದಾಖಲಾಗಿದ್ದಾರೆ
  • ಕೊವಿಡ್ ಹೊರತಾದ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕ್ಲಿಂಟನ್ ವಕ್ತಾರರು ತಿಳಿಸಿದ್ದಾರೆ
  • ಚಿಕಿತ್ಸೆಗೆ ಸ್ಪಂದಿಸುತ್ತಿರುವ ಕ್ಲಿಂಟನ್ ಅವರು ಚೇತರಿಸಿಕೊಳ್ಳುತ್ತಿದ್ದಾರೆಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ
Bill Clinton: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಗೆ ಅನಾರೋಗ್ಯ,  ಆಸ್ಪತ್ರೆಗೆ ದಾಖಲು title=
ಅಮೆರಿಕದ ಮಾಜಿ ಅಧ್ಯಕ್ಷ ಬಿಲ್​ ಕ್ಲಿಂಟನ್​ ಆಸ್ಪತ್ರೆಗೆ ದಾಖಲಾಗಿದ್ದಾರೆ

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್​ ಕ್ಲಿಂಟನ್(Bill Clinton)​ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. 75 ವರ್ಷ ಕ್ಲಿಂಟನ್ ಅವರನ್ನು ದಕ್ಷಿಣ ಕ್ಯಾಲಿಫೋರ್ನಿಯಾದ ಇರ್ವಿನ್​ನಲ್ಲಿರುವ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆಂದು ಅವರ ವಕ್ತಾರರು ತಿಳಿಸಿದ್ದಾರೆ.  

ಬಿಲ್ ಕ್ಲಿಂಟನ್ ಅವರ ವಕ್ತಾರರಾಗಿರುವ ಏಂಜೆಲ್ ಅರೇನಾ(Angel Ureña), ಟ್ವೀಟ್ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಬಿಲ್ ಕ್ಲಿಂಟನ್ ಅವರನ್ನು ಕೊವಿಡ್ ಹೊರತಾದ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸದ್ಯ ಬಿಲ್ ಕ್ಲಿಂಟನ್(Bill Clinton)ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದ 2 ದಿನಗಳ ನಂತರ ಉತ್ತಮ ಚೇತರಿಕೆ ಕಾಣುತ್ತಿದ್ದಾರೆ ಎಂದು ಏಂಜೆಲ್ ತಿಳಿಸಿದ್ದಾರೆ. ಇದಕ್ಕಾಗಿ ಅವರು ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವರ್ಗಕ್ಕೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಕ್ಲಿಂಟನ್ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರಾದ ಅಲ್ಪೇಶ್ ಅಮೀನ್ ಮತ್ತು ಡಾ.ಲಿಸಾ ಬಾರ್ಡಾಕ್ ತಿಳಿಸಿದ್ದಾರೆ. ಮಾಜಿ ಅಧ್ಯಕ್ಷರಿಗೆ ‘IV ಪ್ರತಿಜೀವಕಗಳು ಮತ್ತು ದ್ರವಗಳನ್ನು ನೀಡಲಾಗಿದೆ’ ಎಂದು ಬಾರ್ಡಾಕ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: World's Costliest Water: ಈ ಒಂದು ಲೀಟರ್ ನೀರಿನ ಬೆಲೆಯಲ್ಲಿ ನೀವು 2 BHK ಫ್ಲ್ಯಾಟ್ ಖರೀದಿಸಬಹುದು

‘2 ದಿನಗಳ ಚಿಕಿತ್ಸೆಯ ನಂತರ ಅವರ ಬಿಳಿ ರಕ್ತ ಕಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಮತ್ತು ಅವರು ಪ್ರತಿಜೀವಕಗಳಿಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ’ ಎಂದು ವೈದ್ಯರು ಹೇಳಿದ್ದಾರೆ. ‘ಕ್ಯಾಲಿಫೋರ್ನಿಯಾ ಮೂಲದ ವೈದ್ಯಕೀಯ ತಂಡವು ಅವರ ಹೃದ್ರೋಗ ತಜ್ಞರು ಸೇರಿದಂತೆ ಅಧ್ಯಕ್ಷರ ನ್ಯೂಯಾರ್ಕ್ ಮೂಲದ ವೈದ್ಯಕೀಯ ತಂಡದೊಂದಿಗೆ ನಿರಂತರ ಸಂವಹನ ನಡೆಸುತ್ತಿದೆ. ನಾವು ಅವರನ್ನು ಶೀಘ್ರವೇ ಡಿಸ್ಚಾರ್ಜ್ ಮಾಡುತ್ತೇವೆಂದು’ ವೈದ್ಯರು ತಿಳಿಸಿದ್ದಾರೆ.

2001ರಲ್ಲಿ ಶ್ವೇತಭವನ(White House)ವನ್ನು ತೊರೆದ ನಂತರದ ವರ್ಷಗಳಲ್ಲಿ ಕ್ಲಿಂಟನ್ ಅನೇಕ ಬಾರಿ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದಾರೆ. 2004ರಲ್ಲಿ ಅವರಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿತ್ತು. 2005ರಲ್ಲಿ ಶ್ವಾಸಕೋಶದ ಶಸ್ತ್ರಚಿಕಿತ್ಸೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. 2010ರಲ್ಲಿ ಹೃದಯದ ಅಪಧಮನಿಯಲ್ಲಿ ಒಂದು ಜೋಡಿ ಸ್ಟೆಂಟ್‌ಗಳನ್ನು ಅಳವಡಿಸಲಾಯಿತು.

ಇದನ್ನೂ ಓದಿ: Inflation in Pakistan: ಪಾಕಿಸ್ತಾನದಲ್ಲಿ ಒಂದು ಕಪ್ ಚಹಾದ ಬೆಲೆ ಎಷ್ಟೆಂದು ಕೇಳಿದರೆ ಶಾಕ್ ಆಗ್ತೀರಾ...

ಪ್ರಸ್ತುತ ಆಸ್ಪತ್ರೆಯ ಸಿಬ್ಬಂದಿ ಕ್ಲಿಂಟನ್ ಅವರಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಕೋವಿಡ್-19(COVID-19) ಸಂಬಂಧಿ ಸಮಸ್ಯೆಗಳೂ ಅವರಲ್ಲಿಲ್ಲವೆಂದು ಸ್ಪಷ್ಟಪಡಿಸಲಾಗಿದೆ. ಅವರು ಹೆಚ್ಚಿನ ಪ್ರಮಾಣದಲ್ಲಿ ಸಸ್ಯಾಹಾರಿ ಆಹಾರ ತೆಗೆದುಕೊಳ್ಳುವ ಮೂಲಕ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಇದರಿಂದ ಅವರ ತೂಕ ಕೊಂಚ ಕಡಿಮೆಯಾಗಿದ್ದು, ಆರೋಗ್ಯ ಸುಧಾರಿಸಿದೆ ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

 

 

Trending News