Imran Khan: ಜೈಲಿಗೆ ಹೋಗುವ ಭಯದಿಂದ ಅಸ್ವಸ್ಥರಾದ ಇಮ್ರಾನ್ ಖಾನ್ ಆಸ್ಪತ್ರೆಗೆ ದಾಖಲು!

Imran Khan Hospitalized: ಶನಿವಾರ ಮುಂಜಾನೆ ಆಸ್ಪತ್ರೆ ತಲುಪಿದ ವಿಶೇಷ ವೈದ್ಯರ ತಂಡ ಇಮ್ರಾನ್ ಖಾನ್ ಅವರ ಆರೋಗ್ಯ ತಪಾಸಣೆ ನಡೆಸಿತು. ಅವರ ಹೊಟ್ಟೆಯ ಸಮಸ್ಯೆಯ ಕಾರಣವನ್ನು ಕಂಡುಹಿಡಿಯಲು ವೈದ್ಯರು ಹಲವಾರು ಪರೀಕ್ಷೆಗಳನ್ನು ಮಾಡಿದರು.

Written by - Puttaraj K Alur | Last Updated : May 21, 2023, 04:56 PM IST
  • ಜೈಲಿಗೆ ಹೋಗುವ ಭಯದಿಂದ ಅಸ್ವಸ್ಥರಾದ ಇಮ್ರಾನ್ ಖಾನ್ ಆಸ್ಪತ್ರೆಗೆ ದಾಖಲು
  • ಲಾಹೋರ್‌ನ ಶೌಕತ್ ಖಾನಮ್ ಆಸ್ಪತ್ರೆಯಲ್ಲಿ ವೈದ್ಯರಿಂದ ಇಮ್ರಾನ್ ಆರೋಗ್ಯ ಪರಿಶೀಲನೆ
  • ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಇಮ್ರಾನ್ ಖಾನ್‍ ಅವರಿಗೆ ವೈದ್ಯರಿಂದ ಚಿಕಿತ್ಸೆ
Imran Khan: ಜೈಲಿಗೆ ಹೋಗುವ ಭಯದಿಂದ ಅಸ್ವಸ್ಥರಾದ ಇಮ್ರಾನ್ ಖಾನ್ ಆಸ್ಪತ್ರೆಗೆ ದಾಖಲು! title=
ಇಮ್ರಾನ್ ಖಾನ್ ಆಸ್ಪತ್ರೆಗೆ ದಾಖಲು!

ನವದೆಹಲಿ: ಜೈಲಿಗೆ ಹೋಗುವ ಭಯದಿಂದ ಅಸ್ವಸ್ಥರಾದ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಹಠಾತ್ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಲಾಹೋರ್‌ನ ಶೌಕತ್ ಖಾನಮ್ ಆಸ್ಪತ್ರೆಯಲ್ಲಿ ವೈದ್ಯರು ಅವರ ಆರೋಗ್ಯ ಪರಿಶೀಲಿಸಿದರು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಇಮ್ರಾನ್ ಖಾನ್‍ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಮಾಧ್ಯಮಗಳ ಪ್ರಕಾರ, ಸುಮಾರು 4 ಗಂಟೆಗಳ ಕಾಲ ಆಸ್ಪತ್ರೆಯಲ್ಲಿ ಉಳಿದುಕೊಂಡ ನಂತರ ಇಮ್ರಾನ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆ ತಲುಪಿದರು. ಮಾಜಿ ಕ್ರಿಕೆಟಿಗ-ರಾಜಕಾರಣಿಗೆ ಶುಕ್ರವಾರ ಮಧ್ಯಾಹ್ನದಿಂದಲೂ ಅಸೌಖ್ಯವಿತ್ತು. ಆರೋಗ್ಯದಲ್ಲಿ ಏರುಪೇರಾದ ಕೂಡಲೇ ಅವರನ್ನು ಭಾರೀ ಭದ್ರತೆಯಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ 4 ಗಂಟೆಗಳ ಕಾಲ ಕಳೆದ ನಂತರ ಇಮ್ರಾನ್ ಮನೆಗೆ ಮರಳಿದರು.

ಇದನ್ನೂ ಓದಿ: Quad Summit 2023: ಪ್ರಧಾನಿ ಮೋದಿ ಆಟೋಗ್ರಾಫ್ ಕೇಳಿದ ಜೋ ಬೀಡೆನ್, ನಂತರ ಹೇಳಿದ್ದು ಮನ ತಟ್ಟುವಂತಿದೆ

ಶನಿವಾರ ಮುಂಜಾನೆ ಆಸ್ಪತ್ರೆ ತಲುಪಿದ ವಿಶೇಷ ವೈದ್ಯರ ತಂಡ ಇಮ್ರಾನ್ ಖಾನ್ ಅವರ ಆರೋಗ್ಯ ತಪಾಸಣೆ ನಡೆಸಿತು. ಅವರ ಹೊಟ್ಟೆಯ ಸಮಸ್ಯೆಯ ಕಾರಣವನ್ನು ಕಂಡುಹಿಡಿಯಲು ವೈದ್ಯರು ಹಲವಾರು ಪರೀಕ್ಷೆಗಳನ್ನು ಮಾಡಿದರು.

ಮೇ 9ರಂದು ಅಲ್-ಖಾದಿರ್ ಟ್ರಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಸರ್ಕಾರವು ಇಸ್ಲಾಮಾಬಾದ್ ಹೈಕೋರ್ಟ್ (IHC) ಆವರಣದಲ್ಲಿ ಇಮ್ರಾನ್ ಖಾನ್ ಅವರನ್ನು ಬಂಧಿಸಿತ್ತು. ಪಾಕಿಸ್ತಾನದ ಸುಪ್ರೀಂಕೋರ್ಟ್ ಇಮ್ರಾನ್ ಬಂಧನವನ್ನು ಕಾನೂನುಬಾಹಿರವೆಂದು ಘೋಷಿಸುವವರೆಗೂ ಕೆಲವು ದಿನಗಳ ಕಾಲ ಬಂಧನದಲ್ಲಿದ್ದರು. ಸುಪ್ರೀಂಕೋರ್ಟ್ ಮಧ್ಯಪ್ರವೇಶದ ನಂತರ ಅವರನ್ನು IHC ಮುಂದೆ ಹಾಜರುಪಡಿಸಲಾಯಿತು ಮತ್ತು ಮೇ 12ರಂದು ಅವರ ವಿರುದ್ಧದ ಎಲ್ಲಾ ಪ್ರಕರಣಗಳಿಗೆ ಸಂಬಂಧಿಸಿದಂತೆ 2 ವಾರಗಳವರೆಗೆ ಜಾಮೀನು ನೀಡಲಾಗಿತ್ತು.

ಇದನ್ನೂ ಓದಿ: Video: ಸ್ಪೇನ್‌ನಲ್ಲಿ ಕ್ಯಾಮರಾದಲ್ಲಿ ಸೆರೆಯಾದ ಎಫ್-18 ಫೈಟರ್ ಜೆಟ್ ಪತನ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News