ನವದೆಹಲಿ: ಭಾರತದ ಜಮ್ಮು-ಕಾಶ್ಮೀರದ ಪುಲ್ವಾಮದ ಬಳಿ ಪಾಕ್ ಭಯೋತ್ಪಾದಕ ಸಂಘಟನೆ ನಡೆಸಿದ ಆತ್ಮಾಹುತಿ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಜಪಾನ್, ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನಕ್ಕೆ ತಿಳಿಸಿದೆ.
ಕಾಶ್ಮೀರ ಪರಿಸ್ಥಿತಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಜಪಾನ್ ವಿದೇಶಾಂಗ ಸಚಿವ ಟಾರೋ ಕೊನೊ, ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದ ಪಾಕ್ ಸರ್ಕಾರ ಭಯೋತ್ಪಾದನೆ ನಿಗ್ರಹಕ್ಕೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಅಲ್ಲದೆ, ಫೆಬ್ರವರಿ 26 ರಿಂದ ಭಾರತೀಯ ವಾಯು ಪಡೆ ಮತ್ತು ಪಾಕ್ ವಾಯು ಪಡೆ ನಡುವಿನ ಕಾರ್ಯಾಚರಣೆಗಳಿಂದ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಹತೋಟಿಗೆ ತರಲು ಭಾರತ ಮತ್ತು ಪಾಕಿಸ್ತಾನ ರಾಷ್ಟ್ರಗಳು ಸಂಯಮದಿಂದ ಮತ್ತು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.
Japanese Foreign Minister Taro Kono: In response to the mounting tension due to the operations since 26 February between the Indian Air Force and the Pakistan Air Force, Japan strongly urges India and Pakistan to exercise restraint and stabilize the situation through dialogue. https://t.co/mr9vP4krqR
— ANI (@ANI) February 28, 2019
ಜಮ್ಮು-ಕಾಶ್ಮೀರದ ಪುಲ್ವಾಮಾದ ಬಳಿ ಪಾಕ್ ಉಗ್ರ ಸಂಘಟನೆಯ ಆತ್ಮಾಹುತಿ ದಾಳಿಗೆ ಭಾರತೀಯ ಸೇನೆಯ 40ಕ್ಕೂ ಅಧಿಕ ಯೋಧರು ಹುತಾತ್ಮರಾಗಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ವಾಯು ಪಡೆಯ 12 ಮಿರಾಜ್ -2000 ಯುದ್ಧ ವಿಮಾನಗಳು ಪಾಕ್ ಆಕ್ರಮಿತ ಕಾಶ್ಮೀರ ಮಾತ್ರವಲ್ಲದೇ, ಪಾಕಿಸ್ತಾನ ಗಡಿ ಒಳಗಿದ್ದ ಜೈಶ್ ಉಗ್ರರ ಪ್ರಮುಖ ತರಬೇತಿ ಕೇಂದ್ರವನ್ನೂ ನಾಶಗೊಳಿಸಿ, JeMನ ತರಬೇತಿ ಪಡೆದಿದ್ದ ಕನಿಷ್ಠ 42 ಆತ್ಮಹತ್ಯಾ ಬಾಂಬರ್ಗಳನ್ನು ಹತ್ಯೆ ಮಾಡಿತ್ತು.