ನವದೆಹಲಿ: ನೆರೆ ರಾಷ್ರ ಪಾಕಿಸ್ತಾನದಲ್ಲಿ ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್ಲೈನ್ಸ್ ಗೆ ಸೇರಿದ ನಾಗರಿಕ ವಿಮಾನ ಅಪಘಾತಕ್ಕೀಡಾಗಿದೆ. ಘಟನೆಯ ಕುರಿತು ಪಾಕ್ ಪ್ರಧಾನಿ ಇಮ್ರಾನ್ ಖಾನ್ ದುಃಖ ವ್ಯಕ್ತಪಡಿಸಿದ್ದಾರೆ ಹಾಗೂ ಕೂಡಲೇ ತನಿಖೆಗೆ ಆದೇಶಿಸಿದ್ದಾರೆ. ಜೊತೆಗೆ ಅಪಘಾತದಲ್ಲಿ ದುರ್ಮರಣ ಹೊಂದಿದ ಕುಟುಂಬ ಸದಸ್ಯರ ಪ್ರತಿ ಸಂತಾಪ ಸೂಚಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಇಮ್ರಾನ್ ಖಾನ್, " ಪಾಕಿಸ್ತಾನ್ ಇಂಟರ್ನ್ಯಾಷನಲ್ ಏರ್ಲೈನ್ಸ್ (ಪಿಐಎ) ಅಪಘಾತದಿಂದ ಆಘಾತಕ್ಕೆ ಒಳಗಾಗಿದ್ದೇನೆ ಹಾಗೂ ದುಃಖಿತನಾಗಿದ್ದೇನೆ. ಘಟನೆಯ ಕುರಿತಂತೆ ನಾನು ಪಿಐಎ ಸಿಇಓಅರ್ಶದ್ ಮಳಿ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಸದ್ಯ ಅವರು ಕರಾಚಿಗೆ ರವಾನೆಯಾಗಿದ್ದಾರೆ. ಸದ್ಯ ರೆಸ್ಕ್ಯೂ ಹಾಗೂ ರಿಲೀಫ್ ತಂಡಗಳು ಘಟನಾ ಸ್ಥಳದಲ್ಲಿವೆ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಘಟನೆಗೆ ಸಂಬಂಧಿಸಿದಂತೆ ತಕ್ಷಣದ ತನಿಖೆಗೆ ಆದೇಶಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರ ಪ್ರತಿ ನನ್ನ ಪ್ರಾರ್ಥನೆ ಹಾಗೂ ಸಂತಾಪ ಸೂಚಿಸುತ್ತಿದ್ದೇನೆ" ಎಂದಿದ್ದಾರೆ.
Shocked & saddened by the PIA crash. Am in touch with PIA CEO Arshad Malik, who has left for Karachi & with the rescue & relief teams on ground as this is the priority right now. Immediate inquiry will be instituted. Prayers & condolences go to families of the deceased.
— Imran Khan (@ImranKhanPTI) May 22, 2020
ಪಾಕಿಸ್ತಾನದಲ್ಲಿ ಅಪಘಾತಕ್ಕೀಡಾಗಿರುವ ಎ -320 ವಿಮಾನದಲ್ಲಿ ಒಟ್ಟು 98 ಜನ ಪ್ರಯಾಣಿಕರು ಹಾಗೂ 8 ಜನ ಸಿಬ್ಬಂದಿಗಳಿದ್ದರು ಎನ್ನಲಾಗಿದೆ. ಕರಾಚಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡಲು ವಿಮಾನ ಕೆಳಗೆ ಇಳಿಯುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಲ್ಯಾಂಡಿಂಗ್ ಗೂ ಸ್ವಲ್ಪ ಹೊತ್ತು ಮುಂಚಿತವಾಗಿ ವಸತಿ ಪ್ರದೇಶದಲ್ಲಿ ವಿಮಾನ ಕ್ರಾಶ್ ಲ್ಯಾಂಡಿಂಗ್ ಮಾಡಿದೆ.
ಮಧ್ಯಾಹ್ನ ಸುಮಾರು 1.30ರ ಸುಮಾರಿಗೆ ಈ ವಿಮಾನ ಯಾತ್ರಿಗಳನ್ನು ಹೊತ್ತು ಲಾಹೋರ್ ನಿಂದ ಕರಾಚಿಗೆ ಪ್ರಯಾಣ ಬೆಳೆಸಿತ್ತು. ಆದರೆ, ಏರ್ಪೋರ್ಟ್ ತಲುಪುವ ಕೆಲ ಸಮಯದ ಮುನ್ನವೇ ಜನವಸತಿ ಪ್ರದೇಶದಲ್ಲಿ ಕ್ರ್ಯಾಶ್ ಲ್ಯಾಂಡಿಂಗ್ ಆಗಿದೆ. ಪಾಕ್ ಸೇನೆಯ ಕ್ವಿಕ್ ಆಕ್ಷನ್ ಟೀಂ ಹಾಗೂ ಪಾಕ್ ಸೈನಿಕರು ಸ್ಥಳೀಯ ನಾಗರಿಕರ ಜೊತೆಗೆ ಸೇರಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.