ಇಂಡೋನೇಷ್ಯಾದಲ್ಲಿ ಭೂಕುಸಿತ; ಕನಿಷ್ಠ 9 ಮಂದಿ ಸಾವು

ಸೋಮವಾರ ರಾತ್ರಿ ಭೂಕುಸಿತ ಸಂಭವಿಸಿದ ಸುಕಾಬಿಮಿಯ ನಗರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ವಕ್ತಾರ ತಿಳಿಸಿದ್ದಾರೆ.

Last Updated : Jan 1, 2019, 05:16 PM IST
ಇಂಡೋನೇಷ್ಯಾದಲ್ಲಿ ಭೂಕುಸಿತ; ಕನಿಷ್ಠ 9 ಮಂದಿ ಸಾವು title=
Image courtesy: Reuters

ಜಕಾರ್ತ: ಇಂಡೋನೇಷ್ಯಾದ  ಜಾವಾ ದ್ವೀಪದಲ್ಲಿ ಸಂಭವಿಸಿರುವ ಭೂಕುಸಿತಕ್ಕೆ ಸುಮಾರು 30 ಕ್ಕಿಂತ ಹೆಚ್ಚು ಮನೆಗಳು ಹಾನಿಗೊಳಗಾಗಿದ್ದು, ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ, ಹಲವರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿ ಭೂಕುಸಿತ ಸಂಭವಿಸಿದೆ ಎಂದು Efe ಸುದ್ದಿ ವರದಿ ಮಾಡಿದೆ. ಸುಕಾಬಿಮಿಯ ನಗರದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ (ಬಿಎನ್ಪಿಬಿ) ವಕ್ತಾರ ಸುಟೊಪೊ ಪುರ್ವೋ ನುಗ್ರ್ರೋ ಅವರು ಟ್ವೀಟ್ ಮಾಡಿದ್ದಾರೆ.

ಮಳೆ ಮತ್ತು ಭೂಕುಸಿತದಿಂದಾಗಿ ಪಾರುಗಾಣಿಕೆಗೆ ತೊಂದರೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪ್ರತಿವರ್ಷ ಡಿಸೆಂಬರ್ ನಿಂದ ಫೆಬ್ರವರಿ ವರೆಗೆ ಮಳೆಗಾಲದಲ್ಲಿ ಇಂಡೋನೇಷ್ಯಾದಲ್ಲಿ ಪ್ರವಾಹಗಳು ಮತ್ತು ಭೂಕುಸಿತಗಳು ಇರುತ್ತದೆ. 

Trending News