New Year Celebration: ನ್ಯೂ ಇಯರ್ ಆಚರಣೆ ನಿಷೇಧಿಸಿದ ಪಾಕಿಸ್ತಾನ

New Year In Pakistan: 'ಗಾಜಾ ಮತ್ತು ಪಶ್ಚಿಮ ದಂಡೆಯಲ್ಲಿ ಮುಗ್ಧ ಮಕ್ಕಳು ಮತ್ತು ನಿರಾಯುಧ ಪ್ಯಾಲೆಸ್ತೀನಿಯರ ಹತ್ಯಾಕಾಂಡದಿಂದ ಇಡೀ ಪಾಕಿಸ್ತಾನ ಮತ್ತು ಮುಸ್ಲಿಂ ಜಗತ್ತು ತೀವ್ರ ದುಃಖಿತವಾಗಿದೆ'- ದೇಶದ ಹಂಗಾಮಿ ಪ್ರಧಾನಿ ಅನ್ವರುಲ್ ಹಕ್ ಕಾಕರ್

Written by - Yashaswini V | Last Updated : Dec 29, 2023, 12:08 PM IST
  • ಗಾಜಾದ ಜನರೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಲು ದೇಶದಲ್ಲಿ ಹೊಸ ವರ್ಷಾಚರಣೆಯನ್ನು ನಿಷೇಧಿಸುವುದಾಗಿ ಗುರುವಾರ ಘೋಷಿಸಿದ್ದಾರೆ.
  • ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪಾಕಿಸ್ತಾನದ ನಿಯೋಜಿತ ಪ್ರಧಾನಿ ಅನ್ವರುಲ್ ಹಕ್ ಕಾಕರ್ ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸುವಂತೆ ದೇಶವಾಸಿಗಳಿಗೆ ಮನವಿ ಮಾಡಿದರು
New Year Celebration: ನ್ಯೂ ಇಯರ್ ಆಚರಣೆ ನಿಷೇಧಿಸಿದ ಪಾಕಿಸ್ತಾನ  title=

Pakistan News: 2024ನ್ನು ವಿಜೃಂಭಣೆಯಿಂದ ಆಚರಿಸಲು ಇಡೀ ವಿಶ್ವವೇ ಭರ್ಜರಿ ತಯಾರಿ ನಡೆಯಿಸುತ್ತಿದೆ. ಈ ಮಧ್ಯೆ ಪಾಕಿಸ್ತಾನದಲ್ಲಿ ದೇಶಾದ್ಯಂತ ಹೊಸ ವರ್ಷಾಚರಣೆಯನ್ನು ನಿಷೇಧಿಸಿ ಆದೇಶಿಸಲಾಗಿದೆ. 

ನ್ಯೂ ಇಯರ್ ಆಚರಣೆ ನಿಷೇಧಿಸಿದ ಪಾಕಿಸ್ತಾನ!
ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪಾಕಿಸ್ತಾನದ ನಿಯೋಜಿತ ಪ್ರಧಾನಿ ಅನ್ವರುಲ್ ಹಕ್ ಕಾಕರ್, ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟನ್ನು ವ್ಯಕ್ತಪಡಿಸಲು ಹೊಸ ವರ್ಷದ ಆಚರಣೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿಷೇಧಿಸುವುದಾಗಿ ಘೋಷಿಸಿದರು.

'ಪ್ಯಾಲೆಸ್ತೀನ್‌ನಲ್ಲಿನ ಗಂಭೀರ ಚಿಂತಾಜನಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತು ನಮ್ಮ ಪ್ಯಾಲೆಸ್ತೀನ್ ಸಹೋದರ ಸಹೋದರಿಯರೊಂದಿಗೆ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ, ಹೊಸ ವರ್ಷವನ್ನು ಆಚರಿಸಲು ಆಯೋಜಿಸುವ ಎಲ್ಲಾ ರೀತಿಯ ಕಾರ್ಯಕ್ರಮಗಳ ಮೇಲೆ ಸರ್ಕಾರವು ಕಟ್ಟುನಿಟ್ಟಾದ ನಿಷೇಧವನ್ನು ವಿಧಿಸುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಅನ್ವರುಲ್ ಹಕ್ ಕಾಕರ್ ಹೇಳಿದ್ದಾರೆ. 

ಇದನ್ನೂ ಓದಿ- Baba Vanga: 2024ರಲ್ಲಿ ಇಡೀ ಜಗತ್ತಿಗೆ ಎದುರಾಗಲಿದೆ ದೊಡ್ಡ ಸಂಕಷ್ಟ! ಬಾಬಾ ವಂಗಾ ಭವಿಷ್ಯವೇನು?

ರಾಷ್ಟ್ರವನ್ನುದ್ದೇಶಿಸಿ ಮಾಡಿದ ಸಂಕ್ಷಿಪ್ತ ಭಾಷಣದಲ್ಲಿ ಪ್ಯಾಲೆಸ್ತೀನ್ ಸಹೋದರ-ಸಹೋದರಿಯರೊಂದಿಗೆ ಒಗ್ಗಟ್ಟನ್ನು ಪ್ರದರ್ಶಿಸುವಂತೆ ಮನವಿ ಮಾಡಿದ ಪಾಕಿಸ್ತಾನದ ಹಂಗಾಮಿ ಪ್ರಧಾನಿ  ಅನ್ವರುಲ್ ಹಕ್ ಕಾಕರ್, ಪ್ಯಾಲೆಸ್ತೀನ್‌ನಲ್ಲಿ ಇಸ್ರೇಲಿ ಪಡೆಗಳ ವಿನಾಶಕಾರಿ ಪರಿಣಾಮವನ್ನು ಒತ್ತಿ ಹೇಳಿದರು. 

ಅಕ್ಟೋಬರ್ 7 ರಂದು ಇಸ್ರೇಲಿ ಬಾಂಬ್ ದಾಳಿ ಪ್ರಾರಂಭವಾದಾಗಿನಿಂದ ಇಸ್ರೇಲಿ ಸೈನ್ಯವು ಅನ್ಯಾಯದ ಮಿತಿಗಳನ್ನು ದಾಟಿದೆ.  ಇಸ್ರೇಲಿ ಸೈನ್ಯವು "ಎಲ್ಲಾ ಹಿಂಸೆ ಮತ್ತು ಅನ್ಯಾಯದ ಮಿತಿಗಳನ್ನು ಮೀರಿದೆ ಮತ್ತು ಸುಮಾರು 9,000 ಮಕ್ಕಳು ಸೇರಿದಂತೆ 21,000 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರನ್ನು ಕೊಂದಿದೆ" ಎಂದು ಅವರು ಹೇಳಿದರು.

ಇದನ್ನೂ ಓದಿ- Viral Video: ರೀಲ್ಸ್‌ಗಾಗಿ ಸಂಚಾರ ದಟ್ಟಣೆಯ ರಸ್ತೆಯಲ್ಲಿ ಯುವತಿಯ ಹುಚ್ಚಾಟ!

ಗಾಜಾ ಮತ್ತು ಪಶ್ಚಿಮ ದಂಡೆಯಲ್ಲಿ ಅಮಾಯಕ ಮಕ್ಕಳು ಮತ್ತು ನಿರಾಯುಧ ಪ್ಯಾಲೆಸ್ತೀನಿಯರ ಹತ್ಯಾಕಾಂಡದಿಂದ ಇಡೀ ಪಾಕಿಸ್ತಾನ ಮತ್ತು ಮುಸ್ಲಿಂ ಜಗತ್ತು ತೀವ್ರ ದುಃಖಿತವಾಗಿದೆ ಎಂದವರು ತಿಳಿಸಿದರು.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News