Pakistan: ಹಿಂದೂ ದೇವಾಲಯದ ಮೇಲೆ ಮತ್ತೆ ದಾಳಿ, ಸುತ್ತಿಗೆಯಿಂದ ದೇವಿಯ ವಿಗ್ರಹ ಒಡೆದ ಮತಾಂಧರು..!

ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ದೇವಿಯ ವಿಗ್ರಹವನ್ನು ಭಗ್ನಗೊಳಿಸಿರುವ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ.

Written by - Puttaraj K Alur | Last Updated : Dec 21, 2021, 04:28 PM IST
  • ಪಾಕಿಸ್ತಾನದಲ್ಲಿ ಮತ್ತೆ ಹಿಂದೂ ದೇವಾಲಯದ ಮೇಲೆ ದಾಳಿ, ದೇವಿಯ ವಿಗ್ರಹ ಭಗ್ನ
  • ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಮೂಲಭೂತವಾದಿಗಳಿಂದ ದಾಳಿ
  • ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತ ಇಮ್ರಾನ್ ಖಾನ್ ಸರ್ಕಾರ
Pakistan: ಹಿಂದೂ ದೇವಾಲಯದ ಮೇಲೆ ಮತ್ತೆ ದಾಳಿ, ಸುತ್ತಿಗೆಯಿಂದ ದೇವಿಯ ವಿಗ್ರಹ ಒಡೆದ ಮತಾಂಧರು..!   title=
ಪಾಕಿಸ್ತಾನದಲ್ಲಿ ಮತ್ತೆ ಹಿಂದೂ ದೇವಾಲಯದ ಮೇಲೆ ದಾಳಿ

ಕರಾಚಿ: ಪಾಕಿಸ್ತಾನ(Pakistan)ದಲ್ಲಿ ಮತ್ತೊಮ್ಮೆ ಹಿಂದೂ ದೇವಾಲಯದ ಮೇಲೆ ದಾಳಿ ನಡೆದಿದೆ. ಪ್ರಧಾನಿ ಇಮ್ರಾನ್ ಖಾನ್(Imran Khan) ನೇತೃತ್ವದ ಪಾಕಿಸ್ತಾನದಲ್ಲಿ ಪದೇ ಪದೇ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಇಲ್ಲಿ ವ್ಯಕ್ತಿಯೊಬ್ಬ ದೇವಸ್ಥಾನಕ್ಕೆ ನುಗ್ಗಿ ದೇವಿಯ ವಿಗ್ರಹವನ್ನು ಒಡೆದಿದ್ದಾನೆ. ಸುತ್ತಿಗೆಯಿಂದ ದೇವಿಯ ವಿಗ್ರಹಕ್ಕೆ ಹೊಡೆದು ವಿರೂಪಗೊಳಿಸಲಾಗಿದೆ. ಪಾಕಿಸ್ತಾನಿ ಪತ್ರಕರ್ತ ವಿಂಗಾಸ್ ಪ್ರಕಾರ, ಕಳೆದ 22 ತಿಂಗಳಲ್ಲಿ ಹಿಂದೂ ದೇವಾಲಯಗಳ ಮೇಲೆ ನಡೆದ 9ನೇ ದಾಳಿ ಇದಾಗಿದೆ.

ಮಾಯಾ ದೇವಿಯ ವಿಗ್ರಹ ಒಡೆದ ಮತಾಂಧ!

ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ದೇವಿಯ ವಿಗ್ರಹವನ್ನು ಭಗ್ನ(Goddess Idol Vandalized)ಗೊಳಿಸಿರುವ ಘಟನೆ ಪಾಕಿಸ್ತಾನದ ಕರಾಚಿಯಲ್ಲಿ ನಡೆದಿದೆ. ರಾಂಚೋರ್ ಪ್ರದೇಶದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ ನಡೆಸಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಜೋಗ್ ಮಾಯಾ ದೇವಿಯ ವಿಗ್ರಹವನ್ನು ಸುತ್ತಿಗೆಯಿಂದ ಒಡೆದುಹಾಕಿದ್ದಾನೆ. ಖಚಿತ ಮಾಹಿತಿ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಆರೋಪಿ ವಿರುದ್ಧ ಧರ್ಮನಿಂದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಈಕೆ ಆಧುನಿಕ 'ಆದಿ ಮಾನವ': ಕೈ ಗೆ ಸಿಕ್ಕ ಪ್ರಾಣಿಗಳನ್ನೇ ಕೊಂದು ತಿಂದು ಬದುಕುತ್ತಾಳೆ ಈ ಯುವತಿ.!

ದಾಳಿಯನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ

ಕರಾಚಿಯಲ್ಲಿ ದೇವಿಯ ವಿಗ್ರಹವನ್ನು ಧ್ವಂಸ(Attack On Hindu)ಗೊಳಿಸಿದ ಘಟನೆಯನ್ನು ಬಿಜೆಪಿ ನಾಯಕ ಮಂಜಿಂದರ್ ಸಿಂಗ್ ಸಿರ್ಸಾ ತೀವ್ರವಾಗಿ ಟೀಕಿಸಿದ್ದಾರೆ. ಅಲ್ಪಸಂಖ್ಯಾತರ ವಿರುದ್ಧದ ಭಯೋತ್ಪಾದನೆಗೆ ಪಾಕಿಸ್ತಾನ ಸರ್ಕಾರದ ಬೆಂಬಲವಿದೆ ಎಂದು ಅವರು ಆರೋಪಿಸಿದ್ದಾರೆ.

‘ಹಿಂದೂ ದೇವಾಲಯವನ್ನು ಅಪವಿತ್ರಗೊಳಿಸಲಾಗಿದೆ’

ಪಾಕಿಸ್ತಾನದ ಕರಾಚಿಯಲ್ಲಿ ಮತ್ತೊಂದು ಹಿಂದೂ ದೇವಾಲಯ(Hindu Temple)ವನ್ನು ಅಪವಿತ್ರಗೊಳಿಸಲಾಗಿದೆ ಎಂದು ಮಂಜಿಂದರ್ ಸಿಂಗ್ ಸಿರ್ಸಾ ಹೇಳಿದ್ದಾರೆ. ಆರೋಪಿಗಳು ದೇವಸ್ಥಾನದ ಮೇಲಿನ ಈ ದಾಳಿಯನ್ನು ಸಮರ್ಥಿಸುತ್ತಿದ್ದಾರೆ. ದೇವಸ್ಥಾನವು ಪೂಜೆ ಮಾಡುವ ಸ್ಥಳವಲ್ಲ ಎಂದು ದಾಳಿಕೋರರು ಹೇಳುತ್ತಿದ್ದಾರೆ. ಅಂತಹವರಿಗೆ ಪಾಕಿಸ್ತಾನದಲ್ಲಿ ಬೆಂಬಲವಿದೆ.

ಇದನ್ನೂ ಓದಿ: Omicron: ಬ್ರಿಟನ್‌ನಲ್ಲಿ ಮತ್ತೊಮ್ಮೆ ಕರೋನಾ ವಿನಾಶ, ಒಂದು ದಿನದಲ್ಲಿ 10,000 ಕ್ಕೂ ಹೆಚ್ಚು ಹೊಸ ಪ್ರಕರಣ ದಾಖಲು

ಅಕ್ಟೋಬರ್ ತಿಂಗಳ ಆರಂಭದಲ್ಲಿ ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ(Attack On Temple) ನಡೆಸಲಾಗಿತ್ತು. ದಾಳಿಕೋರರು ದೇವಸ್ಥಾನದಲ್ಲಿ ಇಟ್ಟಿದ್ದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ್ದರು. ಕಳೆದ ಕೆಲವು ವರ್ಷಗಳಿಂದ ಪಾಕಿಸ್ತಾನದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿಗಳು ಹೆಚ್ಚಾಗುತ್ತಿವೆ. ಅಲ್ಪಸಂಖ್ಯಾತರು ಮತ್ತು ಅವರ ಆರಾಧನಾ ಸ್ಥಳಗಳ ಮೇಲಿನ ದಾಳಿಯ ಪ್ರಕರಣಗಳ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯವು ಪಾಕಿಸ್ತಾನಕ್ಕೆ ಹಲವು ಬಾರಿ ಛೀಮಾರಿ ಹಾಕಿದೆ. ಆದರೆ ಪಾಕಿಸ್ತಾನ ಮತ್ತು ಅದರ ಮೂಲಭೂತವಾದಿಗಳು ಈ ದಾಳಿಗಳನ್ನು ತಡೆಯುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News