ಬಿಷ್ಕೆಕ್ (ಕಿರ್ಗಿಸ್ತಾನ್): ಕಿರ್ಗಿಸ್ತಾನ್ ರಾಜಧಾನಿಯಲ್ಲಿ ನಡೆದ ಎಸ್ಸಿಒ ಶೃಂಗಸಭೆಯಲ್ಲಿ ಪಾಕಿಸ್ತಾನ ಪ್ರಧಾನಮಂತ್ರಿ ಸೌಜನ್ಯವಿಲ್ಲದೆ ಇಮ್ರಾನ್ ಖಾನ್ ರಾಜತಾಂತ್ರಿಕ ಶಿಷ್ಟಾಚಾರವನ್ನು ಮುರಿದರು. ಸಮ್ಮೇಳನವನ್ನು ಉದ್ಘಾಟನಾ ಸಮಾರಂಭದ ವಿಡಿಯೋವನ್ನು ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಯ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ನಲ್ಲಿ ಹಂಚಿಕೊಳ್ಳಲಾಗಿದೆ. ಇತರ ಎಲ್ಲ ದೇಶಗಳ ಜನರು ಸಭಾಂಗಣಕ್ಕೆ ಪ್ರವೇಶಿಸುವ ಸಮಯದಲ್ಲಿ ಸ್ವಾಗತದಲ್ಲಿ ನಿಂತಿದ್ದರು. ಇಮ್ರಾನ್ ಖಾನ್ ಮಾತ್ರ ಕುಳಿತಿರುವುದನ್ನು ಕಾಣಬಹುದು.
ಉದ್ಘಾಟನಾ ಸಮಾರಂಭದಲ್ಲಿ, ಎಲ್ಲಾ ದೇಶಗಳ ಮುಖ್ಯಸ್ಥರು ಒಬ್ಬೊಬ್ಬರಾಗಿ ಸಭಾಂಗಣದ ಒಳಗೆ ಪ್ರವೇಶಿಸುತ್ತಿದ್ದರು. ಈ ಸಮಯದಲ್ಲಿ ಇತರ ದೇಶದ ಎಲ್ಲಾ ನಾಯಕರು ಎದ್ದು ನಿಂತು ಚಪ್ಪಾಳೆಯೊಂದಿಗೆ ಸ್ವಾಗತಿಸುತ್ತಿದ್ದಾರೆ. ಆದಾಗ್ಯೂ, ಈ ಅವಧಿಯಲ್ಲಿ ಇಮ್ರಾನ್ ಖಾನ್ ಕುರ್ಚಿಯಲ್ಲಿ ಕುಳಿತಿದ್ದ ಏಕೈಕ ವ್ಯಕ್ತಿಯಾಗಿದ್ದರು. ಸ್ವಲ್ಪ ಸಮಯದ ಬಳಿಕ ಇತರ ದೇಶದ ನಾಯಕರು ನಿಂತಿದ್ದು, ತಾವೊಬ್ಬರೇ ಕುಳಿತಿರುವುದನ್ನು ಗಮನಿಸಿದ ಇಮ್ರಾನ್ ಖಾನ್ ತಕ್ಷಣ ಎದ್ದು ನಿಲ್ಲುತ್ತಾರೆ.
ಆ ವಿಡಿಯೋವನ್ನು ಒಮ್ಮೆ ವೀಕ್ಷಿಸಿ...
Prime Minister of #Pakistan @ImranKhanPTI's Arrival with other World Leaders at Invitation of President of Kyrgyzstan for Opening Ceremony 19th Meeting of the Council of the Heads of State of the Shanghai Cooperation Organization in Bishkek Kyrgyzstan (13.06.19)#SCOSummit2019 pic.twitter.com/fYdKYN3Fv7
— PTI (@PTIofficial) June 13, 2019
ಕಿರ್ಗಿಸ್ತಾನ್ ರಾಜಧಾನಿ ಬಿಷ್ಕೆಕ್ ನಲ್ಲಿ ನಡೆಯುತ್ತಿರುವ ಎರಡು ದಿನಗಳ ಶಾಂಘೈ ಸಹಕಾರ ಸಂಘದ(ಎಸ್ಸಿಒ) ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ದೇಶದ ಪ್ರಮುಖ ನಾಯಕರು ಪಾಲ್ಗೊಂಡಿದ್ದಾರೆ. ಎರಡು ದಿನಗಳ ಈ ಶೃಂಗ ಸಭೆಯಲ್ಲಿ ಎಸ್ಸಿಒ ದೇಶಗಳ ನಡುವಿನ ವ್ಯಾಪಾರ ಮತ್ತು ವಾಣಿಜ್ಯ ಬಾಂಧವ್ಯವನ್ನು ಮತ್ತಷ್ಟು ಸುಧಾರಣೆಗೊಳಿಸಲಿದ್ದಾರೆ ಎನ್ನಲಾಗಿದೆ.