ಶಿಂಜೊ ಅಬೆ ನಿಧನ: ಕೊನೆಯ ಭೇಟಿ ನೆನೆದು ಮೋದಿ ಭಾವುಕ ಪೋಸ್ಟ್‌

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರು ಶುಕ್ರವಾರ ಬೆಳಗ್ಗೆ ಪಶ್ಚಿಮ ಜಪಾನ್‌ನ ನಾರಾ ಪ್ರಿಫೆಕ್ಚರ್‌ನಲ್ಲಿ ಭಾಷಣ ಮಾಡುವಾಗ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಬೆ ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ಈ ಹಿನ್ನೆಲೆ ತಮ್ಮ ಸ್ನೇಹಿತನನ್ನು ನೆನೆದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ. 

Written by - Chetana Devarmani | Last Updated : Jul 8, 2022, 03:37 PM IST
  • ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ನಿಧನ
  • ಕೊನೆಯ ಭೇಟಿಯ ಫೋಟೋ ಶೇರ್‌ ಮಾಡಿದ ಮೋದಿ
  • ಸ್ನೇಹಿತನನ್ನು ನೆನೆದು ಪ್ರಧಾನಿ ಮೋದಿ ಭಾವುಕ ಪೋಸ್ಟ್‌
ಶಿಂಜೊ ಅಬೆ ನಿಧನ: ಕೊನೆಯ ಭೇಟಿ ನೆನೆದು ಮೋದಿ ಭಾವುಕ ಪೋಸ್ಟ್‌  title=
ಪ್ರಧಾನಿ ಮೋದಿ

ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರು ಶುಕ್ರವಾರ ಬೆಳಗ್ಗೆ ಪಶ್ಚಿಮ ಜಪಾನ್‌ನ ನಾರಾ ಪ್ರಿಫೆಕ್ಚರ್‌ನಲ್ಲಿ ಭಾಷಣ ಮಾಡುವಾಗ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಬೆ ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಘೋಷಿಸಿದ್ದಾರೆ. ಈ ಹಿನ್ನೆಲೆ ತಮ್ಮ ಸ್ನೇಹಿತನನ್ನು ನೆನೆದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ. 

ಟ್ವಿಟರ್‌ನಲ್ಲಿ ತಮ್ಮ ಕೊನೆಯ ಭೇಟಿಯ ಪೋಸ್ಟ್‌ ಹಂಚಿಕೊಂಡ ಪ್ರಧಾನಿ ಮೋದಿ, ಟೋಕಿಯೋದಲ್ಲಿ ನನ್ನ ಆತ್ಮೀಯ ಸ್ನೇಹಿತ ಶಿಂಜೊ ಅಬೆ ಅವರೊಂದಿಗಿನ ನನ್ನ ಇತ್ತೀಚಿನ ಭೇಟಿಯ ಫೋಟೋವನ್ನು ಹಂಚಿಕೊಳ್ಳುತ್ತಿದ್ದೇನೆ. ಭಾರತ-ಜಪಾನ್ ಬಾಂಧವ್ಯವನ್ನು ಗಟ್ಟಿಗೊಳಿಸುವಲ್ಲಿ ಸದಾ ಉತ್ಸುಕರಾಗಿದ್ದ ಅವರು ಆಗಷ್ಟೇ ಜಪಾನ್-ಭಾರತ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು ಎಂದು ಬರೆದುಕೊಂಡಿದ್ದಾರೆ. 

 

 

ಇದನ್ನೂ ಓದಿ: Watch: ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ, ವಿಡಿಯೋ ವೈರಲ್‌ 

ಭಾನುವಾರದ ಮೇಲ್ಮನೆ ಚುನಾವಣೆಗೆ ಮುನ್ನ ನಡೆದ ಕಾರ್ಯಕ್ರಮವೊಂದರಲ್ಲಿ ಅಬೆ ಭಾಷಣ ಮಾಡುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ ಎಂದು ರಾಷ್ಟ್ರೀಯ ಪ್ರಸಾರಕ ಎನ್‌ಎಚ್‌ಕೆ ಮತ್ತು ಕ್ಯೋಡೋ ಸುದ್ದಿ ಸಂಸ್ಥೆ ತಿಳಿಸಿದೆ. 67 ವರ್ಷದ ನಾಯಕ ಅಬೆ ಎದೆಗೆ ಗುಂಡು ತಗುಲಿದ್ದು, ಸ್ಥಳದಲ್ಲೇ ಕುಸಿದು ಬಿದ್ದರು ಎಂದು ಅವರ ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ ಮೂಲವೊಂದು ಜಿಜಿ ಸುದ್ದಿ ಸಂಸ್ಥೆಗೆ ತಿಳಿಸಿದೆ.

ಶಂಕಿತ ದಾಳಿಕೋರನನ್ನು ಜಪಾನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಪಾನ್‌ನ ಪ್ರಮುಖ ಸುದ್ದಿ ಸಂಸ್ಥೆ ಕ್ಯೋಡೋ ನ್ಯೂಸ್ ಸ್ಥಳೀಯ ಅಧಿಕಾರಿಗಳನ್ನು ಉಲ್ಲೇಖಿಸಿ ಅಬೆ ಅವರು ಪ್ರಜ್ಞಾಹೀನರಾಗಿದ್ದಾರೆ ಮತ್ತು ಯಾವುದೇ ಪ್ರಮುಖ ಲಕ್ಷಣಗಳನ್ನು ತೋರಿಸುತ್ತಿಲ್ಲ ಎಂದು ವರದಿ ಮಾಡಿದೆ. ಸದ್ಯ ಅವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎನ್ನಲಾಗಿದೆ.

ಅಬೆ ಜಪಾನ್‌ನ ದೀರ್ಘಾವಧಿಯ ಪ್ರಧಾನ ಮಂತ್ರಿಯಾಗಿದ್ದರು. ಅವರು 2006 ರಲ್ಲಿ ಒಂದು ವರ್ಷ ಮತ್ತು ಮತ್ತೆ 2012 ರಿಂದ 2020 ರವರೆಗೆ ಅಧಿಕಾರದಲ್ಲಿದ್ದರು. 

ಇದನ್ನೂ ಓದಿ: Shinzo Abe declared dead; ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ, ಅಧಿಕಾರಿಗಳಿಂದ ಘೋಷಣೆ 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News