Russia-Ukraine Crises: ಭಾರತೀಯ ವಿದ್ಯಾರ್ಥಿಗಳಿಗೆ ಸ್ವದೇಶಕ್ಕೆ ಮರಳುವಂತೆ ಸೂಚಿಸಿ ಅಡ್ವೈಸರಿ ಜಾರಿಗೊಳಿಸಿದ ಭಾರತೀಯ ದೂತಾವಾಸ

Ukraine Crisis - ರಷ್ಯಾ (Russia) ಮತ್ತು ಉಕ್ರೇನ್ (Ukraine) ನಡುವಿನ ಸಂಘರ್ಷ ಮುಂದುವರಿದಿದೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ರಾಯಭಾರ ಕಚೇರಿಯು  (Embassy Of India In Kyiv) ಅಲ್ಲಿನ ವಿದ್ಯಾರ್ಥಿಗಳಿಗೆ ಸ್ವಲ್ಪ ಸಮಯದವರೆಗೆ ಸ್ವದೇಶಕ್ಕೆ ಮರಳುವಂತೆ ಮನವಿ ಮಾಡಿದೆ.

Written by - Nitin Tabib | Last Updated : Feb 15, 2022, 04:48 PM IST
  • ರಷ್ಯಾ-ಉಕ್ರೇನ್ ನಡುವಿನ ಬಿಕ್ಕಟ್ಟು ಮುಂದುವರೆದಿದೆ.
  • ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ಮರಳಬೇಕು ಎಂದು ಸೂಚಿಸಿದ ದೂತಾವಾಸ
  • ಭಾರತೀಯ ದೂತಾವಾಸದಿಂದ ಅಡ್ವೈಸರಿ ಜಾರಿ
Russia-Ukraine Crises: ಭಾರತೀಯ ವಿದ್ಯಾರ್ಥಿಗಳಿಗೆ ಸ್ವದೇಶಕ್ಕೆ ಮರಳುವಂತೆ ಸೂಚಿಸಿ ಅಡ್ವೈಸರಿ ಜಾರಿಗೊಳಿಸಿದ ಭಾರತೀಯ ದೂತಾವಾಸ title=
Russia Ukraine Crisis (File Photo)

Russia Ukraine Crisis - ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಬಿಕ್ಕಟ್ಟು ಜಾಗತಿಕವಾಗಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ. ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದ್ದು, ಇದನ್ನು  ಗಮನಿಸಿದ ಭಾರತೀಯ ದೂತಾವಾಸ  ಉಕ್ರೇನ್‌ನಲ್ಲಿ ನೆಲೆಸಿರುವ ಭಾರತೀಯ ವಿದ್ಯಾರ್ಥಿಗಳಿಗೆ ಭಾರತ ಅಥವಾ ಸುರಕ್ಷಿತ ಸ್ಥಳಕ್ಕೆ ಮರಳುವಂತೆ ಮನವಿ ಮಾಡಿದೆ. ಉಕ್ರೇನ್‌ನಲ್ಲಿ (Ukraine Crisis) ಸುಮಾರು 20 ಸಾವಿರ ವಿದ್ಯಾರ್ಥಿಗಳು ವೈದ್ಯಕೀಯ (Medical) ಮತ್ತು ಎಂಜಿನಿಯರಿಂಗ್ (Engineering) ಶಿಕ್ಷಣ ಪಡೆಯುತ್ತಿದ್ದಾರೆ. 

ರಾಯಭಾರ ಕಚೇರಿ ನೀಡಿದ ಸಲಹೆ ಏನು?
ಭಾರತೀಯ ರಾಯಭಾರ ಕಚೇರಿ ಹೊರಡಿಸಿದ ಸೂಚನೆಗಳಲ್ಲಿ, ಉಕ್ರೇನ್‌ನಲ್ಲಿನ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯರಿಗೆ ಸ್ವದೇಶಕ್ಕೆ ಮರಳಲು ಮನವಿ ಇದೆ ಎಂದು ಹೇಳಲಾಗಿದೆ. ಎಲ್ಲಾ ಭಾರತೀಯ ನಾಗರಿಕರು ತಾತ್ಕಾಲಿಕವಾಗಿ ಸ್ವದೇಶಕ್ಕೆ ಅಥವಾ ಸುರಕ್ಷಿತ ಸ್ಥಳಕ್ಕೆ ಮರಳಬೇಕು. ಕೀವ್‌ನಲ್ಲಿ ವಾಸಿಸುವ ಭಾರತೀಯರಿಗೆ ಮತ್ತು ವಿಶೇಷವಾಗಿ ವಿದ್ಯಾರ್ಥಿಗಳಿಗೆ ಈ ಮನವಿ ಇದೆ ಎಂದು ಭಾರತೀಯ ರಾಯಭಾರ ಕಚೇರಿ ಹೇಳಿದೆ. ಅವರ ವಾಸ್ತವ್ಯವು ಹೆಚ್ಚು ಮುಖ್ಯವಲ್ಲದಿದ್ದರೆ, ಅವರು ಅಲ್ಲಿಂದ ಹಿಂತಿರುಗಬಹುದು ಎಂದು ದೂತಾವಾಸ ಸಲಹೆ ನೀಡಿದೆ.

ಇದನ್ನೂ ಓದಿ-World War: ಮಹಾಯುದ್ಧ ಆರಂಭದ ಸಂಕೇತವೇ ಇದು! ಉಕ್ರೇನ್-ರಷ್ಯಾ ಯುದ್ಧದಲ್ಲಿ ಯಾರು ಯಾರಿಗೆ ಸಾಥ್? ಇಲ್ಲದೆ ಡಿಟೇಲ್ಸ್

ಉಕ್ರೇನ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿದ್ದಾರೆ
ಉಕ್ರೇನ್‌ನಲ್ಲಿ ಸುಮಾರು 20 ಸಾವಿರ ಭಾರತೀಯ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಉಕ್ರೇನ್‌ನಲ್ಲಿ ವೈದ್ಯಕೀಯ ಶಿಕ್ಷಣ ಅಮೆರಿಕ ಮತ್ತು ಯುರೋಪಿಯನ್ ದೇಶಗಳಿಗಿಂತ ಅಗ್ಗವಾಗಿದೆ. ಭಾರತದಲ್ಲಿ ವೈದ್ಯಕೀಯ ಸೀಟುಗಳ ಸಂಖ್ಯೆ ಕಡಿಮೆ ಇರುವುದರಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉಕ್ರೇನ್‌ಗೆ ಓದಲು ಹೋಗುತ್ತಾರೆ. ವೈದ್ಯಕೀಯವಲ್ಲದೆ ಇಂಜಿನಿಯರಿಂಗ್ ವಿದ್ಯಾರ್ಥಿಗಳೂ ಕೂಡ ಅಲ್ಲಿ ಇದ್ದಾರೆ. ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ, ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ಪಶ್ಚಿಮ ಉಕ್ರೇನ್‌ನಲ್ಲಿ ವಾಸಿಸುತ್ತಿದ್ದಾರೆ.

ಇದನ್ನೂ ಓದಿ-UKRAINE-RUSSIA CRISIS: ಉಕ್ರೇನ್ ಮೇಲೆ ರಷ್ಯಾ ದಾಳಿ ನಡೆಸಲಿದೆಯಾ! ಅಮೇರಿಕಾ-ಬ್ರಿಟನ್ ಗಳು ಹೇಳಿದ್ದೇನು, ಇಲ್ಲಿದೆ ಸದ್ಯದ ಸ್ಥಿತಿಯ ವಿವರ

ಹೆಚ್ಚಿನ ಸಂಖ್ಯೆಯ ದಕ್ಷಿಣ ಭಾರತದ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿದ್ದಾರೆ
ಭಾರತದ ವೈದ್ಯಕೀಯ ಕಾಲೇಜುಗಳಲ್ಲಿ ಸುಮಾರು 88 ಸಾವಿರ ಸೀಟುಗಳಿದ್ದು, 8 ಲಕ್ಷಕ್ಕೂ ಹೆಚ್ಚು ಮಕ್ಕಳು ಪರೀಕ್ಷೆ ಬರೆಯುತ್ತಾರೆ. ಉಕ್ರೇನ್‌ನಲ್ಲಿ ಪ್ರವೇಶ ಪಡೆಯುವುದು ಅಷ್ಟು ಕಷ್ಟವಲ್ಲ ಮತ್ತು ಅಲ್ಲಿನ ಅಧ್ಯಯನಗಳು ತುಲನಾತ್ಮಕವಾಗಿ ಅಗ್ಗವಾಗಿವೆ. ಉಕ್ರೇನ್‌ನಲ್ಲಿ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕೇರಳದ ಅನೇಕ ವಿದ್ಯಾರ್ಥಿಗಳು ಅಧ್ಯಯನಕ್ಕೆ ಹೋಗುತ್ತಾರೆ. ಇದಲ್ಲದೆ, ಪಂಜಾಬ್, ಮಹಾರಾಷ್ಟ್ರ ಮತ್ತು ರಾಜಸ್ಥಾನದಿಂದಲೋ ಕೂಡ ಹೆಚ್ಚಿನಸಂಖ್ಯೆಯ ವಿದ್ಯಾರ್ಥಿಗಳು ಅಧ್ಯಯನಕ್ಕೆ ಹೋಗುತ್ತಾರೆ.

ಇದನ್ನೂ ಓದಿ-Armenia-Azerbaijan war: 5ಸಾವಿರಕ್ಕೂ ಹೆಚ್ಚು ಮಂದಿ ಸಾವು, ಮತ್ತೆ ವಿಶ್ವ ಯುದ್ಧದ ಬೆದರಿಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News