India on Afghanistan Crisis: ಕಾಬೂಲ್‌ನಲ್ಲಿ ಹದಗೆಟ್ಟ ಭದ್ರತಾ ಪರಿಸ್ಥಿತಿ: ನಾವು ಸಿಖ್, ಹಿಂದೂ ಸಮುದಾಯಗಳ ಸಂಪರ್ಕದಲ್ಲಿದ್ದೇವೆ ಎಂದ ಭಾರತ

ಇದಲ್ಲದೇ, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಫ್ಘಾನಿಸ್ತಾನದ ಎಲ್ಲಾ ಬೆಳವಣಿಗೆಗಳನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ.  

Written by - Yashaswini V | Last Updated : Aug 17, 2021, 08:08 AM IST
  • ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ದೇಶದಿಂದ ಪಲಾಯನ ಮಾಡಿದ ಕೆಲವು ಗಂಟೆಗಳ ನಂತರ ಭಾನುವಾರ ಸಂಜೆ ತಾಲಿಬಾನ್ ಕಾಬೂಲ್ ಅನ್ನು ಸಂಪೂರ್ಣವಾಗಿ ವಶಪಡಿಸಿಕೊಂಡಿತು
  • ಕಾಬೂಲ್‌ನಲ್ಲಿ ಭದ್ರತಾ ಪರಿಸ್ಥಿತಿ ಹದಗೆಟ್ಟಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿಕೆಯನ್ನು ನೀಡಿದೆ
  • ಇದಲ್ಲದೇ, ವಿದೇಶಾಂಗ ಸಚಿವಾಲಯವು ಅಫ್ಘಾನಿಸ್ತಾನದಲ್ಲಿನ ಎಲ್ಲಾ ಬೆಳವಣಿಗೆಗಳನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ
India on Afghanistan Crisis: ಕಾಬೂಲ್‌ನಲ್ಲಿ ಹದಗೆಟ್ಟ ಭದ್ರತಾ ಪರಿಸ್ಥಿತಿ: ನಾವು ಸಿಖ್, ಹಿಂದೂ ಸಮುದಾಯಗಳ ಸಂಪರ್ಕದಲ್ಲಿದ್ದೇವೆ ಎಂದ ಭಾರತ title=
Afghanistan Crisis

India on Afghanistan crisis: ಅಫ್ಘಾನಿಸ್ತಾನದಲ್ಲಿನ ಇತ್ತೀಚಿನ ಬೆಳವಣಿಗೆಗಳಿಗೆ ತನ್ನ ಮೊದಲ ಪ್ರತಿಕ್ರಿಯೆ ನೀಡಿರುವ ಭಾರತವು, ಸರ್ಕಾರವು ಅಲ್ಲಿನ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ ಮತ್ತು ತನ್ನ ಹಿತಾಸಕ್ತಿಗಳು ಮತ್ತು ಆ ದೇಶದಲ್ಲಿ ಸಿಲುಕಿರುವ ಭಾರತೀಯ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ. 

ಕಾಬೂಲ್‌ನಲ್ಲಿ (Kabul) ಭದ್ರತಾ ಪರಿಸ್ಥಿತಿ ಹದಗೆಟ್ಟಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿಕೆಯನ್ನು ನೀಡಿದೆ. ಇದಲ್ಲದೇ, ವಿದೇಶಾಂಗ ಸಚಿವಾಲಯವು ಅಫ್ಘಾನಿಸ್ತಾನದಲ್ಲಿನ ಎಲ್ಲಾ ಬೆಳವಣಿಗೆಗಳನ್ನು ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಹೇಳಿದೆ. ಸಚಿವಾಲಯವು, ಕಾಬೂಲ್‌ನಲ್ಲಿ ಕಳೆದ ಕೆಲವು ದಿನಗಳಿಂದ ಭದ್ರತಾ ಪರಿಸ್ಥಿತಿ ಗಣನೀಯವಾಗಿ ಹದಗೆಟ್ಟಿದೆ; ಇದು ವೇಗವಾಗಿ ಬದಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡಿದೆ.

ಇದನ್ನೂ ಓದಿ - Afghanistan Crisis Video: ಆಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಭಯ ಯಾವ ರೀತಿ ಇದೆ ಗೊತ್ತಾ? ಈ ವಿಡಿಯೋ ನೋಡಿ ಗೊತ್ತಾಗುತ್ತೆ

ಅಫ್ಘಾನಿಸ್ತಾನದಲ್ಲಿ (Afghanistan) ಭಾರತಕ್ಕೆ ಹಿಂದಿರುಗಲು ಬಯಸುವ ಕೆಲವು ಭಾರತೀಯ ಪ್ರಜೆಗಳಿದ್ದಾರೆ ಮತ್ತು ನಾವು ಅವರೊಂದಿಗೆ ಸಂಪರ್ಕದಲ್ಲಿದ್ದೇವೆ. ಇದರ ಜೊತೆಗೆ ನಾವು ಅಫ್ಘಾನ್ ಸಿಖ್, ಹಿಂದೂ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ; ಅಫ್ಘಾನಿಸ್ತಾನವನ್ನು ತೊರೆಯಲು ಬಯಸುವವರಿಗೆ ಸಹಾಯವನ್ನು ಒದಗಿಸಲಾಗುವುದು. ಕಾಬೂಲ್ ವಿಮಾನ ನಿಲ್ದಾಣದಿಂದ ವಿಮಾನಗಳ ವಾಣಿಜ್ಯ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಪ್ರಕ್ರಿಯೆಯನ್ನು ಪುನರಾರಂಭಿಸಲು ವಿಮಾನಗಳ ಪುನರಾರಂಭಕ್ಕಾಗಿ ಕಾಯುತ್ತಿದೆ ಎಂದು ಭಾರತ ಹೇಳಿದೆ. 

ಇದನ್ನೂ ಓದಿ - ಜಾಗತಿಕ ಭಯೋತ್ಪಾದಕ ಬೆದರಿಕೆಯ ನಿಗ್ರಹಕ್ಕೆ ಜಗತ್ತು ಒಂದಾಗಬೇಕಾಗಿದೆ-ವಿಶ್ವಸಂಸ್ಥೆ

ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಅಫ್ಘಾನಿಸ್ತಾನದ ಪರಿಸ್ಥಿತಿಯನ್ನು ಉನ್ನತ ಮಟ್ಟದಲ್ಲಿ ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಅಫ್ಘಾನಿಸ್ತಾನದಲ್ಲಿ ನಮ್ಮ ಹಿತಾಸಕ್ತಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News