ಪಾಕ್‌ಗೆ ಅಫ್ಘಾನಿಸ್ತಾನದಿಂದ ಖಡಕ್‌ ವಾರ್ನಿಂಗ್‌!

ಇತ್ತೀಚೆಗಷ್ಟೆ ಅಫ್ಘಾನಿಸ್ತಾನದ ಖೋಸ್ಟ್ ಮತ್ತು ಕುನಾರ್ ಪ್ರಾಂತ್ಯಗಳ ಮೇಲೆ ಪಾಕ್ ವೈಮಾನಿಕ ದಾಳಿಯನ್ನು ನಡೆಸಿ ಸುಮಾರು 60 ನಾಗರಿಕರನ್ನು ಕೊಂದಿತ್ತು. 

Written by - Bhavishya Shetty | Last Updated : Apr 17, 2022, 03:49 PM IST
  • "ವೈಮಾನಿಕ ದಾಳಿ ಮುಂದುವರೆದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ"
  • ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ತಾಲಿಬಾನ್‌
  • ಈ ಹಿಂದೆ ದಾಳಿ ನಡೆಸಿ 60 ಮಂದಿಯನ್ನು ಕೊಂದಿದ್ದ ಪಾಕ್‌
ಪಾಕ್‌ಗೆ ಅಫ್ಘಾನಿಸ್ತಾನದಿಂದ ಖಡಕ್‌ ವಾರ್ನಿಂಗ್‌! title=
Taliban

ಅಫ್ಘಾನಿಸ್ತಾನ ಮೇಲೆ ಇತ್ತೀಚಿನ ದಿನಗಳಲ್ಲಿ ಹಲವಾರು ಬಾರಿ ವೈಮಾನಿಕ ದಾಳಿ ನಡೆಸಿರುವ ಪಾಕಿಸ್ಥಾನಕ್ಕೆ ತಾಲಿಬಾನ್‌ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದು, ಒಂದು ವೇಳೆ ಇದೇ ರೀತಿಯಲ್ಲಿ ದಾಳಿಯನ್ನು ಮುಂದುವರೆಸಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದೆ. 

ಇದನ್ನು ಓದಿ: ಕೀವ್‌, ಲುವಿಬ್‌ ಮೇಲೆ ರಷ್ಯಾ ಕ್ಷಿಪಣಿ ದಾಳಿ

ಇತ್ತೀಚೆಗಷ್ಟೆ ಅಫ್ಘಾನಿಸ್ತಾನದ ಖೋಸ್ಟ್ ಮತ್ತು ಕುನಾರ್ ಪ್ರಾಂತ್ಯಗಳ ಮೇಲೆ ಪಾಕ್ ವೈಮಾನಿಕ ದಾಳಿಯನ್ನು ನಡೆಸಿ ಸುಮಾರು 60 ನಾಗರಿಕರನ್ನು ಕೊಂದಿತ್ತು. ಈ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಅಫ್ಘಾನಿಸ್ತಾನದ ಮಾಹಿತಿ ಮತ್ತು ಸಂಸ್ಕೃತಿ ಸಚಿವ ಜಬೀವುಲ್ಲಾ ಮುಜಾಹಿದ್,  ಪಾಕಿಸ್ತಾನವು ಅಫ್ಘಾನಿಸ್ತಾನದ ಜನರ ತಾಳ್ಮೆಯನ್ನು ಪರೀಕ್ಷಿಸಬಾರದು. ಒಂದು ವೇಳೆ ಇದೇ ಕೃತ್ಯ ಮುಂದುವರೆದರೆ ಗಂಭೀರ ಪರಿಣಾಮಗಳನ್ನು ಎದುರಿಸಲು ಸಿದ್ಧವಾಗಿರಬೇಕು ಎಂದಿದ್ದಾರೆ.

ನಾವು ರಾಜತಾಂತ್ರಿಕ ಮಾರ್ಗಗಳು ಮತ್ತು ಮಾತುಕತೆಗಳ ಮೂಲಕ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ. ಇಂತಹ ಕೃತ್ಯಗಳು ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆಯನ್ನು ಉಂಟು ಮಾಡುತ್ತದೆ. ಅಲ್ಲದೇ ಸಂಘರ್ಷಕ್ಕೆ ಕಾರಣವಾಗಬಹುದು ಎಂದು ಎಚ್ಚರಿಕೆ ನೀಡಿದೆ. 

ಇದನ್ನು ಓದಿ: ಮೊದಲ ಬಾರಿ ಬ್ರಿಟಿಷ್‌ ಪ್ರಧಾನಿ ಗುಜರಾತ್‌ಗೆ ಭೇಟಿ

ಇತ್ತೀಚೆಗಷ್ಟೇ ಅಫ್ಘಾನಿಸ್ತಾನದ ವಿದೇಶಾಂಗ ಸಚಿವಾಲಯವು ಕಾಬೂಲ್‌ನಲ್ಲಿರುವ ಪಾಕಿಸ್ತಾನದ ರಾಯಭಾರಿ ಮನ್ಸೂರ್ ಅಹ್ಮದ್ ಖಾನ್ ಅವರನ್ನು ಸಚಿವಾಲಯಕ್ಕೆ ಕರೆಸಿ, ಈ ವಿಚಾರವಾಗಿ ಚರ್ಚೆ ನಡೆಸಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಆಡಳಿತಕ್ಕೆ ಬರಲು ಪರೋಕ್ಷವಾಗಿ ಸಹಕಾರ ನೀಡಿದ್ದ ಪಾಕಿಸ್ತಾನಕ್ಕೆ ಈಗ ಸ್ವತಃ ತಾಲಿಬಾನ್ ಸರ್ಕಾರ ಎಚ್ಚರಿಕೆ ನೀಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News