ಕಾಶ್ಮೀರದಲ್ಲಿನ ನಿರ್ಬಂಧಗಳನ್ನು ಹಿಂತೆಗೆಯದ ಹೊರತು ಯಾವುದೇ ಮಾತುಕತೆ ಇಲ್ಲ- ಪಾಕಿಸ್ತಾನ

ದ್ವಿಪಕ್ಷೀಯ ಮಾತುಕತೆಗಾಗಿ ಭಾರತದ ಪ್ರಸ್ತಾಪವನ್ನು ಷರತ್ತು ಬದ್ಧ ಮಾತುಕತೆ ಎಂದು ಕರೆದ ನಂತರ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಭಾನುವಾರ ಕಾಶ್ಮೀರದಲ್ಲಿ ನಿರ್ಬಂಧಗಳನ್ನು ಹಿಂತೆಗೆಯುವವರೆಗೆ ಭಾರತದೊಂದಿಗೆ ಯಾವುದೇ ಮಾತುಕತೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

Last Updated : Sep 1, 2019, 07:10 PM IST
 ಕಾಶ್ಮೀರದಲ್ಲಿನ ನಿರ್ಬಂಧಗಳನ್ನು ಹಿಂತೆಗೆಯದ ಹೊರತು ಯಾವುದೇ ಮಾತುಕತೆ ಇಲ್ಲ- ಪಾಕಿಸ್ತಾನ  title=
file photo:

ನವದೆಹಲಿ: ದ್ವಿಪಕ್ಷೀಯ ಮಾತುಕತೆಗಾಗಿ ಭಾರತದ ಪ್ರಸ್ತಾಪವನ್ನು ಷರತ್ತು ಬದ್ಧ ಮಾತುಕತೆ ಎಂದು ಕರೆದ ನಂತರ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಷಿ ಭಾನುವಾರ ಕಾಶ್ಮೀರದಲ್ಲಿ ನಿರ್ಬಂಧಗಳನ್ನು ಹಿಂತೆಗೆಯುವವರೆಗೆ ಭಾರತದೊಂದಿಗೆ ಯಾವುದೇ ಮಾತುಕತೆ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲು ಪಾಕಿಸ್ತಾನಕ್ಕೆ ಯಾವುದೇ ಆಕ್ಷೇಪವಿಲ್ಲ ಮತ್ತು ಮೂರನೇ ವ್ಯಕ್ತಿಯ ಮಧ್ಯಸ್ಥಿಕೆಯನ್ನು ಸಹ ಸ್ವಾಗತಿಸುತ್ತೇವೆ ಎಂದು ಸಚಿವರು ಬಿಬಿಸಿ ಉರ್ದುಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದರು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ನೇ ವಿಧಿಯನ್ನು ಹಿಂತೆಗೆದುಕೊಳ್ಳುವ ನವದೆಹಲಿಯ ಕ್ರಮಕ್ಕೆ ಮುಂಚಿತವಾಗಿ ಹೇರಿದ ಕಾಶ್ಮೀರದಲ್ಲಿನ ನಿರ್ಬಂಧಗಳನ್ನು ಭಾರತ ತೆಗೆದು ಹಾಕಿದರೆ ಮಾತ್ರ ಮಾತುಕತೆ ನಡೆಯಬಹುದು ಎಂದು ಹೇಳಿದರು.ಆದರೆ ಖುರೇಷಿ ಅವರು ಭಾರತದ ಕಡೆಯಿಂದ ಮಾತುಕತೆ ನಡೆಸಲು ಅನುಕೂಲಕರ ವಾತಾವರಣವನ್ನು ಕಾಣಲಿಲ್ಲ ಎಂದು ಹೇಳಿದ್ದಾರೆ.

ಇದೇ ವೇಳೆ ಯುದ್ಧವನ್ನು ತಳ್ಳಿಹಾಕಿದ ವಿದೇಶಾಂಗ ಸಚಿವರು ಪಾಕಿಸ್ತಾನ ಎಂದಿಗೂ ಆಕ್ರಮಣಕಾರಿ ನೀತಿಯನ್ನು ಅಳವಡಿಸಿಕೊಂಡಿಲ್ಲ, ಅದು ಯಾವಾಗಲೂ ಶಾಂತಿಗೆ ಆದ್ಯತೆ ನೀಡುತ್ತದೆ ಎಂದು ಒತ್ತಿ ಹೇಳಿದರು. 'ಒಂದು ಯುದ್ಧ ಜನರ ನಷ್ಟಕ್ಕೆ ಕಾರಣವಾಗುತ್ತದೆ ಮತ್ತು ಪ್ರಪಂಚವು ಅದರಿಂದ ಪ್ರಭಾವಿತವಾಗಿರುತ್ತದೆ, ಆದ್ದರಿಂದ ಯುದ್ಧವು ಆಯ್ಕೆಯಲ್ಲ" ಎಂದು ಅವರು ಬಿಬಿಸಿ ಉರ್ದುವಿಗೆ ತಿಳಿಸಿದರು.

ನವದೆಹಲಿ ಆಗಸ್ಟ್ 5 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ ಸಂವಿಧಾನದ 370 ನೇ ವಿಧಿಯನ್ನು ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದಾಗಿನಿಂದ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ.

Trending News