ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮರು ಆಯ್ಕೆ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. 

Last Updated : Mar 19, 2018, 01:21 PM IST
ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮರು ಆಯ್ಕೆ title=

ಮಾಸ್ಕೊ: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. 

ನಾಲ್ಕನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಪುಟಿನ್ ಅಧಿಕಾರಾವಧಿ 2024 ರವರೆಗೆ ವಿಸ್ತರಣೆಯಾಗಲಿದೆ. ಜೋಸೆಫ್ ಸ್ಟಾಲಿನ್ ನಂತರ ಎರಡು ದಶಕಗಳವರೆಗೆ ಆಡಳಿತ ನಡೆಸಿದ ಮೊದಲ ಕ್ರೆಮ್ಲಿನ್ ನಾಯಕ ಎಂಬ ಹೆಗ್ಗಳಿಕೆಗೆ ಪುಟಿನ್ ಪಾತ್ರರಾಗಿದ್ದಾರೆ. ಶೇ.73ಕ್ಕಿಂತ ಹೆಚ್ಚು ಮತಗಳನ್ನು ಗಳಿಸುವ ಮೂಲಕ ಪುಟಿನ್ ಈ ಬಾರಿ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.

ನಾಲ್ಕನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪುಟಿನ್, ಮಾಸ್ಕೋದ ಮನೆಝನ್ಯ ಸ್ಕ್ವೇರ್'ನಲ್ಲಿ ನಡೆದ ಸಮಾರಂಭದಲ್ಲಿ ತಮಗೆ ಬೆಂಬಲ ನೀಡಿದ ಕಾರ್ಯಕರ್ತರು ಮತ್ತು ಪ್ರಜೆಗಳಿಗೆ ಧನ್ಯವಾದ ಹೇಳಿದರೂ. ಮುಂದಿನ ದಿನಗಳಲ್ಲಿ ದೇಶದ ಅಭಿವೃದ್ಧಿಯನ್ನು ಮತ್ತಷ್ಟು ಸಾಧನೆಯತ್ತ  ಕೊಂಡಯ್ಯಲು ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು. 

Trending News